ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಛಾಟಿತ ಬಿಜೆಪಿ ಶಾಸಕ ಕುಲ್ ದೀಪ್ ಸಿಂಗ್ ಸೆನೆಗರ್ ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಧರ್ಮೇಶ್ ಶರ್ಮಾ ಸೋಮವಾರ ತೀರ್ಪು ನೀಡಿದ್ದಾರೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಕ್ಕಾಗಿ ಪೋಸ್ಕೋ ಕಾಯ್ದೆಯ ವಿವಿಧ ನಿಬಂಧನೆಗಳು ಹಾಗೂ ಭಾರತೀಯ ದಂಡ ಸಂಹಿತೆ ಕಲಂ 120ಬಿ. 363,366 ಹಾಗೂ 376 ರಡಿ ಶಾಸಕ ಕುಲದೀಪ್ ಸೆನೆಗರ್ ತಪ್ಪಿತಸ್ಥ ಘೋಷಿಸಲಾಗಿದ್ದು, ಡಿ.19ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.