ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೇಂಗಾರ್ ಅವರನ್ನು ದೋಷಿ ಎಂದು ಘೋಷಿಸಿರುವ ದೆಹಲಿ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಘೋಷಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
2017ರಲ್ಲಿ ಅಪ್ರಾಪ್ತೆಯ ಮೇಲಿನ ಅತ್ಯಚಾರ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಸೋಮವಾರ ನ್ಯಾಯಾಲಯ ಸೇಂಗಾರ್ ಅನ್ನು ಅಪರಾಧಿ ಎಂದು ಘೋಷಿಸಿತ್ತು. ಅಲ್ಲದೆ, ಶಿಕ್ಷೆ ಪ್ರಮಾಣ ಮಂಗಳವಾರ ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ, ಮಂಗಳವಾರ ವಿಚಾರಣೆ ಆರಂಭವಾದ ಬೆನ್ನಲ್ಲೆ, ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮಾ, ಶುಕ್ರವಾರಕ್ಕೆ ಮುಂದೂಡಿದರು.