ನವದೆಹಲಿ: ಉತ್ತರಪ್ರದೇಶದ ಉನ್ನಾವೋದಲ್ಲಿ ದುರುಳರ ಕೈಗೆ ಸಿಲುಕಿ ನರಳಿದ್ದ ಅತ್ಯಾಚಾರ ಸಂತ್ರಸ್ಥೆ ಕೊನೆಯುಸಿರೆಳೆದಿದ್ದಾರೆ. ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ರಾತ್ರಿ 11.40ರ ಹೊತ್ತಿಗೆ ಅವರು ನಿಧನ ಹೊಂದಿದ್ದಾರೆ. ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾಕ್ಷ್ಯ ಹೇಳಲು ನ್ಯಾಯಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರನ್ನು ಅಪಹರಿಸಿ ಬೆಂಕಿ ಹಚ್ಚಲಾಗಿತ್ತು. ಶೇಕಡ 90ರಷ್ಟು ಸುಟ್ಟ ಗಾಯಗಳಾದ ಆ ಸಂತ್ರಸ್ತೆ ಜೀವನ್ಮರಣದ ಹೋರಾಟ ನಡೆಸುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ನವದೆಹಲಿಗೆ ಕೊಂಡೊಯ್ಯಲಾದರೂ ಫಲಕಾರಿಯಾಗಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.