ಹೈದರಾಬಾದ್: ಪಶುವೈದ್ಯೆ “ದಿಶಾ” ಅತ್ಯಾಚಾರ, ಹತ್ಯೆ ಆರೋಪಿಗಳ ಮೇಲೆ ಎನ್ ಕೌಂಟರ್ ನಡೆಸಿದ ಪೊಲೀಸರಿಗೆ ರಾಷ್ಟ್ರೀಯ ಮಾನವಹಕ್ಕು ಆಯೋಗ ನೋಟೀಸ್ ಜಾರಿ ಮಾಡಿದೆ.
ಆರೋಪಿಗಳ ಮೃತ ದೇಹಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಶವಗಳನ್ನು ಮೆಹಬೂಬ್ ನಗರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ
ಮಾಧ್ಯಮ ವರದಿಗಳ ಆಧಾರದ ಮೇಲೆ ಪೊಲೀಸರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಘಟನೆಯ ತುರ್ತು ತನಿಖೆಗೆ ಆದೇಶಿಸಿದೆ.