ಹೈದರಾಬಾದ್: ನಾಲ್ವರು ಅತ್ಯಾಚಾರಿಗಳು ಪೊಲೀಸ್ ಎನ್ ಕೌಂಟರ್ ಗೆ ಬಲಿಯಾಗಿರುವುದಕ್ಕೆ ದೇಶಾದ್ಯಂತ ನೆಮ್ಮದಿ ಮನೆ ಮಾಡಿದೆ. ಈ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದು ಕನ್ನಡಿಗ ಅಧಿಕಾರಿ. ಸೈಬರಾಬಾದ್ ಪೊಲೀಸ್ ಆಯುಕ್ತರಾಗಿರುವ ವಿಶ್ವನಾಥ್ ಸಜ್ಜನರ್. ಮೂಲತ: ಹುಬ್ಬಳ್ಳಿಯವರು. 2018 ಮಾರ್ಚ್ ತಿಂಗಳಲ್ಲಿ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಸಜ್ಜನವರ್, ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡ ಮೊದಲ ದಿನ ಮಾತನಾಡಿದ ಅವರು, ಮಹಿಳೆ ಮತ್ತು ಮಕ್ಕಳ ಸುರಕ್ಷತೆ ತಮ್ಮ ಮೊದಲ ಆದ್ಯತೆ ಎಂದು ಹೇಳಿದ್ದರು.