ನವದೆಹಲಿ: ಕಾಂಗ್ರೆಸ್ ತನ್ನ 135ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಪಕ್ಷ ತನ್ನ ಸುದೀರ್ಘ ಇತಿಹಾಸದ ತುಣಕುಗಳ ವಿಡೀಯೋ ಒಂದನ್ನು ಶೇರ್ ಮಾಡಿದೆ. ಕಾಂಗ್ರೆಸ್ ಪ್ರತಿಪಾದಿಸುತ್ತಿರುವ ಮೌಲ್ಯಗಳು, ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಅದು ಮಾಡಿದ ತ್ಯಾಗ ಮತ್ತು ಸಾಮಾಜಿಕ ಅಭಿವೃದ್ದಿ ಕಾರ್ಯಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ. ಇದೇ ವೇಳೆ, ಕೇಂದ್ರ ಸರ್ಕಾರ ಪೌರತ್ವ ಕಾನೂನಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ