ಬೆಂಗಳೂರು: ಉಪಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜನತಾ ನ್ಯಾಯಾಲಯ ಅನರ್ಹ ಶಾಸಕರಿಗೆ ತಕ್ಕ ಪಾಠ ಕಲಿಸಲಿದೆ ಎಂದು ಭಾವಿಸಿದ್ದೆವು. ಆದರೆ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಎಪಿಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಲಾಗಿದೆ ಎಂದಿದ್ದಾರೆ.