ನವದೆಹಲಿ: ಕೇರಳ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿಯೇ ತನ್ನ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕೇರಳ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ರಾಷ್ಟ್ರ ವಿರೋಧಿ ಅಥವಾ ಸಮಾಜ ವಿರೋಧಿ ಚಟುವಟಿಕೆ ಮಾಡುವವರು ಕೇರಳ ಸರ್ಕಾರಕ್ಕೆ ಕಾಣುವುದಿಲ್ಲ ಎಂದು ಶೋಭಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮ್ಮತಿಸಿದ್ದಕ್ಕೆ ಮಲಪ್ಪುರಂ ಬಳಿಯ ಕುಟ್ಟಿಪುರಂ ಗ್ರಾಮದ ಹಿಂದುಗಳಿಗೆ ನೀರು ಪೂರೈಕೆ ಮಾಡಿಲ್ಲ ಎಂದು ಸಂಸದೆ ಶೋಭಾ ಟ್ವೀಟ್ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಶೋಭಾ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದರು.
ಕೇರಳ ಸರ್ಕಾರದಿಂದ ವೋಟ್ ಬ್ಯಾಂಕ್ ರಾಜಕಾರಣ; ಸಂಸದೆ ಶೋಭಾ ಕಿಡಿ
Follow Us