ನವದೆಹಲಿ: ಚುನಾವಣಾ ಪ್ರಕ್ರಿಯೆಯಿಂದ ಕ್ರಿಮಿನಲ್ ಗಳನ್ನು ದೂರವಿಡುವಂತೆ ರೂಪುರೇಷೆ ನಿರ್ಮಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ರಾಜಕಾರಣಿಗಳು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ತಮ್ಮ ಕ್ರಿಮಿನಲ್ ಹಿನ್ನೆಲೆಯ ವಿವರ ನೀಡಬೇಕು ಎಂಬ ನಿರ್ದೇಶನ ರಾಜಕೀಯವನ್ನು ಶುದ್ಧೀಕರಿಸಲು ನೆರವಾಗಿಲ್ಲ ಎಂದು ಭಾರತೀಯ ಚುನಾವಣಾ ಆಯೋಗದ ಹೇಳಿಕೆ ಹಿನ್ನೆಲೆಯಲ್ಲಿ ನ್ಯಾಯಪೀಠ ಈ ಆದೇಶ ನೀಡಿದೆ.
ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳು ರಾಜಕೀಯಕ್ಕೆ ಪ್ರವೇಶಿಸಿದಂತೆ ತಡೆಯಲು ನಿರ್ದೇಶನ ಕೋರಿ ಬಿಜೆಪಿ ಮುಖಂಡ ಅಶ್ವಿನಿ ಕುಮಾರ್ ಉಪಾಧ್ಯಾಯ್ ಅರ್ಜಿ ಸಲ್ಲಿಸಿದ್ದಾರೆ.
ಕ್ರಿಮಿನಲ್ ಗಳನ್ನು ಚುನಾವಣೆಯಿಂದ ದೂರವಿಡಲು ಆಯೋಗಕ್ಕೆ ಸುಪ್ರೀಂ ನಿರ್ದೇಶನ
Follow Us