ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪಥಸಂಚಲನದಲ್ಲಿ ಕರ್ನಾಟಕ ಸೇರಿ 12 ರಾಜ್ಯಗಳ ಸ್ತಬ್ಧಚಿತ್ರಗಳು ಆಯ್ಕೆಯಾಗಿವೆ. ಕೇರಳ, ಪಶ್ಚಿಮಬಂಗಾಳ ಹಾಗೂ ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳ ಸ್ತಬ್ಧಚಿತ್ರವನ್ನು ರಕ್ಷಣಾ ಇಲಾಖೆ ತಿರಸ್ಕರಿಸಿದೆ. ಈ ಬಾರಿ ಪಥಸಂಚಲನದಲ್ಲಿ ಕರ್ನಾಟಕದಿಂದ ಜಗಜ್ಯೋತಿ ಬಸವೇಶ್ವರ ಅನುಭವ ಮಂಟಪ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ.