ನವದೆಹಲಿ: ಕೇಂದ್ರ ಮಾಜಿ ಹಣಕಾಸು ಸಚಿವ ಪಿ . ಚಿದಂಬರಂ ಅವರಿಗೆ ಇಂದು ಮಹತ್ವದ ದಿನ. ಐಎನ್ ಎಕ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿದಂಬರಂ ಜಾಮೀನು ಅರ್ಜಿ ತೀರ್ಪು ಇಂದು ಹೊರ ಬೀಳಲಿದೆ. ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ್ದನ್ನು ವಿರೋಧಿಸಿ ಚಿದಂಬರಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ ಪೀಠ ಈ ಕುರಿತು ವಿಚಾರಣೆ ನಡೆಸಿ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಚಿದಂಬರಂ ಜಾಮೀನು ಅರ್ಜಿಯನ್ನು ಜಾರಿ ನಿರ್ದೇಶನಾಲಯ ಬಲವಾಗಿ ವಿರೋಧಿಸಿದೆ