ನವದಹಲಿ: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರ ಮತ್ತು ಲಡಾಕ್ ಗೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ಉನ್ನತ ಮಟ್ಟದ ಮಾತುಕತೆಗೆ ಚಾಲನೆ ನೀಡಲಾಗಿದೆ. ಸಂವಿಧಾನದ 371ನೇ ವಿಧಿ ಅನ್ವಯ ವಿಶೇಷ ಸ್ಥಾನಮಾನದ ಸಮಾಲೋಚನೆ ನಡೆದಿದೆ. ಪ್ರಾದೇಶಿಕ ಅಸಮತೋಲನ ನಿವಾರಿಸುವ ಗುರಿಯನ್ನು ಈ ಸ್ಥಾನಮಾನ ಹೊಂದಿದೆ. ಮಹಾರಾಷ್ಟ್ರ, ಮಣಿಪುರ ಸಹಿತ ಹಲವು ರಾಜ್ಯಗಳಲ್ಲಿ ಇದು ಜಾರಿಯಲ್ಲಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ಮಾತ್ರ ಸೀಮಿತವಾಗಿದ್ದ ಸಂವಿಧಾನದ 370ನೇ ವಿಧಿಯಡಿಯ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿತ್ತು