ಜಿ ಎಸ್ ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳು! : ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ ಜಿ ಎಸ್ ಟಿ ವ್ಯಾಪ್ತಿಗೆ ತರುವ ಬಗ್ಗೆ ಜಿ ಎಸ್ ಟಿ ಮಂಡಳಿ ನಿರ್ಧರಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ಹಿಂದಿನ ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಈ ಬಗ್ಗೆ ಜಿ ಎಸ್ ಟಿ ಮಂಡಳಿ ಸಭೆಯಲ್ಲಿ ಪ್ರಸ್ತಾಪಿಸಿದ್ದರು. ರಾಜ್ಯಗಳ ಪ್ರತಿನಿಧಿಗಳಿರುವ ಜಿ ಎಸ್ ಟಿ ಮಂಡಳಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ ಎಂದಿದ್ದಾರೆ.