ನವದೆಹಲಿ: ಜೆ ಎನ್ ಯು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ ಎನ್ ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ 19 ಮಂದಿ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ. ಜೆ ಎನ್ ಯು ಆಡಳಿತ ಮಂಡಳಿ ನೀಡಿದ ದೂರಿನ ಅನ್ವಯ ಈ ಕ್ರಮ ತೆಗೆದುಕೊಳ್ಳಲಾಗಿದೆ. ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮತ್ತು ವಿಶ್ವ ವಿದ್ಯಾನಿಲಯ ಆವರಣದಲ್ಲಿ ದಾಂಧಲೆ ನಡೆಸಿದ ಆರೋಪವನ್ನು ಇವರ ವಿರುದ್ಧ ಹೊರಿಸಲಾಗಿದೆ.