ನವದೆಹಲಿ: ದಲಿತ ಕ್ರಿಶ್ಚಿಯನ್ನರಿಗೆ ಪರಿಶಿಷ್ಟ ಜಾತಿ (ಎಸ್ಸಿ)ಯ ಸ್ಥಾನಮಾನ ಕೋರಿದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಸಮ್ಮತಿಸಿದೆ.
ನ್ಯಾಷನಲ್ ಕೌನ್ಸಿಲ್ ಆಫ್ ದಲಿತ್ ಕ್ರಿಶ್ಚಿಯನ್ಸ್ ಈ ಅರ್ಜಿ ಸಲ್ಲಿಸಿತ್ತು. ಪರಿಶಿಷ್ಟ ಜಾತಿಯಲ್ಲಿದ್ದು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರನ್ಜು ದಲಿತ ಕ್ರಿಶ್ಚಿಯನ್ನರು ಎಂದು ಪರಿಗಣಿಸಿ ಸರ್ಕಾರದಿಂದ ಎಸ್ಸಿ ಸಮುದಾಯಕ್ಕೆ ಸಿಗುವ ಸೌಲಭ್ಯ ಇವರಿಗೂ ಸಿಗಬೇಕು ಎಂಬ ಬೇಡಿಕೆಯನ್ನು ಅರ್ಜಿಯಲ್ಲಿ ಮಂಡಿಸಲಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸುವಂತೆ ಮಿನಿಸ್ಟ್ರಿ ಆಫ್ ಸೋಷಿಯಲ್ ಜಸ್ಟೀಸ್ ಆ್ಯಂಡ್ ಎಂಪವರ್ಮೆಂಟ್, ನ್ಯಾಷನಲ್ ಕಮಿಷನ್ ಫಾರ್ ಷೆಡ್ಯೂಲ್ಡ್ ಕಾಸ್ಟ್ಸ್, ನ್ಯಾಷನಲ್ ಕಮಿಷನ್ ಫಾರ್ ಮೈನಾರಿಟೀಸ್ ಮತ್ತು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾಕ್ಕೆ ಸುಪ್ರೀಂ ಕೋರ್ಟ್ನ ಸಿಜೆಐ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ನ್ಯಾಯಪೀಠ ನೋಟಿಸ್ ನೀಡಿದೆ.
ದಲಿತ ಕ್ರಿಶ್ಚಿಯನ್ನರಿಗೆ ಎಸ್ಸಿ ಸ್ಥಾನಮಾನ: ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
Follow Us