ಹೈದರಾಬಾದ್: ತೆಲಂಗಾಣದ ಪಶು ವೈದ್ಯೆ ಮೇಲೆ ಅತ್ಯಾಚಾರವೆಸಗಿ, ಪೊಲೀಸರ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾದ ನಾಲ್ವರು ಆರೋಪಿಗಳ ಮೃತದೇಹವನ್ನು ಮರು ಮರಣತೋತ್ತರ ಪರೀಕ್ಷೆ ನಡೆಸುವಂತೆ ತೆಲಂಗಾಣ ಹೈಕೋರ್ಟ್ ಆದೇಶಿಸಿದೆ.
ಮೃತದೇಹಗಳಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ತಜ್ಞರು ಮರು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ದೇಹವನ್ನು ಸಂಬಂಧಿಕರಿಗೆ ಒಪ್ಪಿಸಬಹುದು ಎಂದು ನ್ಯಾಯಪೀಠ ಆದೇಶಿಸಿದೆ. ಮೃತದೇಹಗಳು ಈಗಾಗಲೇ ಶೇ. 50ರಷ್ಟು ಕೊಳೆತುಹೋಗಿವೆ ಎಂದು ಆಸ್ಪತ್ರೆ ಆಡಳಿತಾಧಿಕಾರಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ದಿಶಾ ಪ್ರಕರಣ; ಮೃತದೇಹಗಳ ಮರು ಮರಣೋತ್ತರ ಪರೀಕ್ಷೆಗೆ ಆದೇಶ
Follow Us