ನವದೆಹಲಿ: ದೆಹಲಿಯ ಜೆಎನ್ ಯು ಕ್ಯಾಂಪಸ್ ಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿರುವ ನಟಿ ದೀಪಿಕಾ ಪಡುಕೋಣೆ 2011ರಿಂದಲೂ ಕಾಂಗ್ರೆಸ್ ಪರವಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಜೆಎನ್ ಯು ವಿದ್ಯಾರ್ಥಿಗಳಿಗೆ ಒಬ್ಬ ಸಿನಿಮಾ ಕಲಾವಿದೆ ಬೆಂಬಲ
ವ್ಯಕ್ತಪಡಿಸಿದ್ದಾರೆ ಎಂಬುದು ಸಾಮಾನ್ಯರ ಜನರ ವಾದವಾಗಿದೆ. ಆದರೆ ವಾಸ್ತವವೆಂದರೆ
ಆಕೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂಬುದ ಹಲವರಿಗೆ ತಿಳಿದಿಲ್ಲ ಎಂದು ಅವರು
ಟ್ವಿಟರ್ ನಲ್ಲಿ ಹಂಚಿಕೊಂಡಿರುವ ವಿಡಿಯೋ ಒಂದರಲ್ಲಿ ಹೇಳಿದ್ದಾರೆ.