ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ನಗರ ಪ್ರದೇಶದಲ್ಲಿ ಭಾನುವಾರ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಮೂರು ಬಸ್ಗಳು ಬೆಂಕಿಗಾಹುತಿಯಾಗಿವೆ.
ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್, ವಾಟರ್ ಗನ್ಗಳನ್ನು ಬಳಸಿದ್ದಾರೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ.