ನವದೆಹಲಿ: ಉತ್ತರ ಭಾರತದಾದ್ಯಂತ ಶೀತಗಾಳಿ ತಲ್ಲಣ ಸೃಷ್ಚಿಸಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ರಾಜಧಾನಿ ನವದೆಹಲಿಯಂತೂ ಚಳಿಯಿಂದ ಕಂಗೆಟ್ಟಿದೆ. ತಾಪಮಾನ 3.6 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿದೆ. ದಟ್ಟ ಮಂಜು ಕವಿದಿದ್ದು ವಿಮಾನಗಳ ಹಾರಾಟಕ್ಕೆ ತೊಂದರೆಯಾಗಿದೆ. ಮೂವತ್ತಕ್ಕೂ ಹೆಚ್ಚು ರೈಲುಗಳು ತಡವಾಗಿ ಸಂಚರಿಸುತ್ತಿವೆ. ಈ ಮಧ್ಯೆ ಶೀತ ಮಾರುತದ ಹಿನ್ನೆಲೆಯಲ್ಲಿ ಹರ್ಯಾಣದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.