ನವದೆಹಲಿ: ಜ.31 ಹಾಗೂ ಫೆ.1 ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನಡೆಯಲಿದೆ.
ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ (ಯುಎಫ್‌ಬಿಯು) ಈ ಮುಷ್ಕರಕ್ಕೆ ಕರೆನೀಡಿದೆ.
ಬ್ಯಾಂಕ್ ಸಿಬ್ಬಂದಿ ವೇತನ ಪರಿಷ್ಕರಣೆ ಕುರಿತ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ 2 ದಿನಗಳ ಕಾಲ ಮುಷ್ಕರ ನಡೆಸಲಾಗುತ್ತಿದೆ.. ಮುಷ್ಕರದ ದಿನ ಯಾವುದೇ ಬ್ಯಾಂಕ್ ವಹಿವಾಟು ಇರುವುದಿಲ್ಲ ಎಂದು ಯುಎಫ್ಬಿಯ ಸಿದ್ದಾರ್ಥ ಖಾನ್ ತಿಳಿಸಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಅದೇ ದಿನ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮಹತ್ವ ಬಂದಿದೆ.
ದೇಶಾದ್ಯಂತ ಜ.31, ಫೆ.1ರಂದು ಬ್ಯಾಂಕ್ ಮುಷ್ಕರ
Follow Us