ನವದೆಹಲಿ; ‘ರೇಪ್ ಇನ್ ಇಂಡಿಯಾ’ ಹೇಳಿಕೆಗಾಗಿ ಕ್ಷಮೆ ಕೇಳುವಂತೆ ಆಡಳಿತ ಪಕ್ಷದ ನಾಯಕರ ಟೀಕೆಗಳಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ. ಸತ್ಯ ಹೇಳಿದ್ದಕ್ಕಾಗಿ ಕ್ಷಮೆ ಕೇಳುವುದಿಲ್ಲ’ ಎಂದಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ‘ಭಾರತ್ ಬಚಾವ್ ’ ಜಾಥಾದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, ದೇಶದಲ್ಲಿ ಹೆಚ್ಚುತ್ತಿರುವ ಲೈಂಗಿಕ ಅಪರಾಧಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಬಿಜೆಪಿ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.