ನವದೆಹಲಿ: ಈರುಳ್ಳಿ ದರ ಏರಿಕೆ ವಿಚಾರ ಲೋಕಸಭೆಯಲ್ಲಿ ಗುರುವಾರವೂ ಗಂಭೀರ ಚರ್ಚೆಗೆ ಕಾರಣವಾಯಿತು. ಇಂತಹ ಚರ್ಚೆಯ ನಡುವೆಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಮ್ಮ ಮನೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ತಿನ್ನುವುದಿಲ್ಲ, ನಾನು ಈರುಳ್ಳಿ, ಬೆಳ್ಳುಳ್ಳಿ ತಿನ್ನದ ಕುಟುಂಬಕ್ಕೆ ಸೇರಿದವಳು, ಹೀಗಾಗಿ ಬೆಲೆ ಏರಿಕೆಯ ಚಿಂತೆಯಿಲ್ಲ ಎಂದರು.
ಇದಕ್ಕೆ ಸಂಸದರೊಬ್ಬರು, ಅತಿಯಾಗಿ ಈರುಳ್ಳಿ ಸೇವಿಸುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ಹೇಳಿದರು.
ಬೆಲೆ ಏರಿಕೆ ಇಳಿಕೆಗೆ ಕ್ರಮ:
ಈರುಳ್ಳಿ ದರ ಏರಿಕೆ ತಗ್ಗಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು ಅಡುಗೆ ಪದಾರ್ಥಗಳನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡಲು ತಂತ್ರಜ್ಞಾನ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
2014ರಿಂದ ಈರುಳ್ಳಿ ಬೆಲೆಯಲ್ಲಿ ಏರಿಳಿತವಾಗುತ್ತಲೇ ಇದೆ. ಹೆಚ್ಚುವರಿ ಬೆಳೆಯಾದಾಗ ರಫ್ತಿಗೆ ಬೆಂಬಲವನ್ನು ಸರ್ಕಾರ ನೀಡಿದೆ. ರಫ್ತಿಗೆ ಶೇಕಡಾ 5ರಿಂದ 7ರಷ್ಟು ಸಹಾಯ ಮಾಡಲಾಗಿದೆ. ಸರಿಯಾದ ಸುಧಾರಿತ ಅತ್ಯಾಧುನಿಕ ಸಂಗ್ರಾಹಕ ವ್ಯವಸ್ಥೆ ನಮ್ಮಲ್ಲಿಲ್ಲ, ವೈಜ್ಞಾನಿಕ ವ್ಯವಸ್ಥೆಯಿಲ್ಲ. ಇದರಿಂದಾಗಿ ದೀರ್ಘಕಾಲದವರೆಗೆ ಸಂಗ್ರಹಿಸಿಡಲು ಕಷ್ಟವಾಗುತ್ತಿದೆ ಎಂದರು.
ನಾನು ಈರುಳ್ಳಿ, ಬೆಳ್ಳುಳ್ಳಿ ತಿನ್ನಲ್ಲ- ಕೇಂದ್ರ ಸಚಿವೆ ನಿರ್ಮಲಾ
Follow Us