ಬೆಂಗಳೂರು : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆನೀಡಿದ್ದ ಭಾರತ ಬಂದ್ ನಿರೀಕ್ಷೆಯಂತೆ ರಾಜ್ಯದಲ್ಲಿ ಯಶಸ್ವಿಯಾಗಲಿಲ್ಲ. ರಾಜ್ಯದ ಅಲ್ಲಲ್ಲಿ ಸಾಂಕೇತಿಕ ಪ್ರತಿಭಟನೆಗಳು ನಡೆದವು.
ರಾಜ್ಯದಲ್ಲಿ ಜನಜೀವನ ಎಂದಿನಂತಿದ್ದು, ಬಸ್, ಆಟೋ, ಮೆಟ್ರೋ ಸಂಚಾರ ಮಾಮೂಲಿ ಎನ್ನುವಂತಿತ್ತು. ಅಂಗಡಿ ಮುಂಗಟ್ಟುಗಳು ದಿನವಿಡೀ ವಹಿವಾಟು ನಡೆಸಿದವು. ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದವು.
ಆದರೆ, ಪಶ್ಚಿಮ ಬಂಗಾಳ, ಅಸ್ಸಾಂ, ಮಣಿಪುರ ಸೇರಿ ಹಲವು ರಾಜ್ಯಗಳಲ್ಲಿ ಬಂದ್ ಆಚರಣೆಗೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಬಸ್ ಗಳಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಲಾಯಿತು.