ನವದೆಹಲಿ: ನಿರ್ಭಯಾ ಪ್ರಕರಣದ ಇಬ್ಬರು ಅಪರಾಧಿಗಳು ಸಲ್ಲಿಸಿರುವ ಕ್ಯುರೇಟಿವ್ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳ ಪೀಠ ಮಂಗಳವಾರ (ಜ.14) ಕೈಗೆತ್ತಿಕೊಳ್ಳಲಿದೆ.
ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ಮಂಗಳವಾರ ಮಧ್ಯಾಹ್ನ ವಿಚಾರಣೆ ನಡೆಸಲಿದೆ. ಪ್ರಕರಣ ನಾಲ್ವರು ಅಪರಾಧಿಗಳಲ್ಲಿ ವಿನಯ್ ಶರ್ಮಾ ಮತ್ತು ಮುಖೇಶ್ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾರೆ. ಇದು ಅಪರಾಧಿಗಳ ಕೊನೆ ಪ್ರಯತ್ನವಾಗಿದೆ. ನಾಲ್ವರು ಅಪರಾಧಿಗಳಿಗೆ ಜ.22ರಂದು ಮರಣದಂಡನೆ ವಿಧಿಸಿ ಪಟಿಯಾಲ ಕೋರ್ಟ್ ಆದೇಶಿಸಿದೆ.
ನಿರ್ಭಯಾ ಅಪರಾಧಿಗಳ ಕ್ಯುರೇಟಿವ್ ಅರ್ಜಿ ವಿಚಾರಣೆ 14ಕ್ಕೆ
Follow Us