ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದ ಬೆನ್ನಲ್ಲೇ ಅಪರಾಧಿ ಮುಖೇಶ್ ಕುಮಾರ್ ಸಿಂಗ್ ಕ್ಷಮಾದಾನ ಕೋರಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.
ಇದು ಅಪರಾಧಿಗಳಿಗೆ ಇರುವ ಕೊನೇ ಕಾನೂನು ಪ್ರಕ್ರಿಯೆಯಾಗಿದ್ದು, ಮುಖೇಶ್ ಹೊರತುಪಡಿಸಿ ಇನ್ಯಾವ ಅಪರಾಧಿಗಳು ಅರ್ಜಿ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜ.22ರಂದು ಬೆಳಗ್ಗೆ 7 ಗಂಟೆಗೆ ಗಲ್ಲು ಶಿಕ್ಷೆ ವಿಧಿಸುವಂತೆ ಈಗಾಗಲೇ ದೆಹಲಿ ಪಟಿಯಾಲಾ ನ್ಯಾಯಾಲಯ ಆದೇಶ ನೀಡಿದೆ.
ನಿರ್ಭಯಾ ಕೇಸ್: ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಮನವಿ
Follow Us