ನವದೆಹಲಿ: ನಿರ್ಭಯ ಪ್ರಕರಣದ ದೋಷಿ ಅಕ್ಷಯ್ ಕುಮಾರ್ ಸಲ್ಲಿಸಿದ್ಧ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಮರಣ ದಂಡನೆ ಶಿಕ್ಷೆ ವಿಧಿಸಿದ್ದನ್ನು ಅಕ್ಷಯ್ ಕುಮಾರ್ ಪ್ರಶ್ನಿಸಿದ್ದಾನೆ. ಮುಖ್ಯ ನ್ಯಾಯಮೂರ್ತಿ ಬೊಬ್ಡೆ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಬದಲಿಗೆ ಹೊಸ ಪೀಠವನ್ನು ರಚಿಸಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಮಧ್ಯೆ ಅಕ್ಷಯ್ ಕುಮಾರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿರೋಧಿಸಿ ನಿರ್ಭಯ ತಾಯಿ ಕೂಡ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಕೂಡ ಇಂದು ನಡೆಯಲಿದೆ.