ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ, ಹಿಂಸಾಚಾರ ನಿಲ್ಲದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಭೇಟಿಗೆ ಕಾಲಾವಕಾಶ ಕೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ದೆಹಲಿಯಲ್ಲಿ ಬಿಗಡಾಯಿಸುತ್ತಿರುವ ಕಾನೂನು ಸುವ್ಯವಸ್ಥೆ ಕುರಿತು ಚಿಂತೆಯಾಗಿದೆ. ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಗೃಹ ಸಚಿವ ಅವರನ್ನು ತಕ್ಷಣ ಭೇಟಿಯಾಗಲು ಸಮಯ ಕೇಳಿದ್ದೇನೆ’ ಎಂದಿದ್ದಾರೆ.