ಇಂದೋರ್: ಪೌರತ್ವ ತಿದ್ದುಪಡಿ ಕಾಯ್ದೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯವರ್ಗಿಯ ಸೇರಿದಂತೆ 350 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಇಂಧೋರ್ ನ ಸನ್ಯೋಗಿತಗಣಿ ಪೊಲೀಸರು ಪ್ರಕಣದ ದಾಖಲಿಸಲಾಗಿದೆ. ಇವರು ನಿಷೇಧಾಜ್ಞೆ ಜಾರಿಯಲ್ಲಿರುವಾಗಲೇ ಉಪ ಆಯುಕ್ತ ಆಕಾಶ್ ತ್ರಿಪಾಠಿ ಅವರ ನಿವಾಸದಲ್ಲಿ ಸಭೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.