Thursday, December 9, 2021

ನೌಕಾಪಡೆಯಲ್ಲಿ ಪಾಕ್ ಪರ ಬೇಹುಗಾರಿಕೆ: ಹದಿಮೂರು ಮಂದಿಯ ಬಂಧನ

Follow Us

ನವದೆಹಲಿ:  ಹನಿ ಟ್ರಾಪ್ ಗೆ ಒಳಗಾಗಿ ದೇಶದ ಮಹತ್ವದ ನೌಕಾಪಡೆ ರಹಸ್ಯಗಳನ್ನು ಪಾಕಿಸ್ತಾನದ ಐಎಸ್ ಐ ಗೆ ಹಸ್ತಾಂತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  11 ನೌಕಾಪಡೆ ಅಧಿಕಾರಿಗಳು ಸೇರಿದಂತೆ ಒಟ್ಟು 13 ಮಂದಿಯನ್ನು ಬಂಧಿಸಲಾಗಿದೆ.   ವಿಶಾಖಪಟ್ಟಣಂ ಸೇರಿದಂತೆ ದೇಶದ ಮಹತ್ವದ ನೌಕಾಪಡೆ ನೆಲೆಯಲ್ಲಿ ನ಼ಡೆಸಲಾದ ಕಾರ್ಯಾಚರಣೆಯಲ್ಲಿ ಈ ಅಧಿಕಾರಿಗಳನ್ನು ಬಂಧಿಸಲಾಗಿದೆ. ಮೊದಲಿಗೆ ನೌಕಾ ಪಡೆ ಅಧಿಕಾರಿಗಳನ್ನು ಹನಿ ಟ್ರಾಫ್ ಜಾಲಕ್ಕೆ ಸಿಲುಕಿಸಿದ ಖದೀಮರು ಬಳಿಕ ಬ್ಲಾಕ್ ಮೇಲ್ ತಂತ್ರದ ಮೂಲಕ ಮಾಹಿತಿ ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ. ಇದು ಬೆಳಕಿಗೆ ಬಂದ ಬಳಿಕ ನೌಕಾಪಡೆ ಸಿಬ್ಬಂದಿ ಸಾಮಾಜಿಕ ಜಾಲ ತಾಣಗಳನ್ನು ಬಳಸುವುದರ ಮೇಲೆ ನಿರ್ಭಂಧ ವಿಧಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!