ಜೈಪುರ: ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಹಾಗೂ ಅವರ ತಂದೆ ಮೋತಿಲಾಲ್ ನೆಹರೂ ಅವರ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ರೂಪದರ್ಶಿ, ಬಾಲಿವುಡ್ ನಟಿ ಪಾಯಲ್ ರೋಹ್ಟಗಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ನ್ಯಾಯಾಲಯ 8 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಪಾಯಲ್ ವಿರುದ್ಧ ರಾಜಸ್ಥಾನ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಚಾರ್ಮೇಶ್ ವರ್ಮಾ ಅಕ್ಟೋಬರ್ ೧೦ ರಂದು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಪಾಯಲ್ ನೆಹರೂ ಕುಟುಂಬದ ವಿರುದ್ಧ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ್ದರು.