ನವದೆಹಲಿ: ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊಲ್ಕತ್ತಾದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ. ಕೇರಳದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಮತ್ತು ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗಳು ಸಂಚಾರ ಮೊಟಕುಗೊಳಿಸಿವೆ. ಕರ್ನಾಟಕದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್ ಮತ್ತು ಇತರ ಸಾರಿಗೆ ವಾಹನಗಳು ಸಂಚಾರ ಆರಂಭಿಸಿವೆ.