ಶ್ರೀನಗರ: ಭಾರತದ ಮುಂಚೂಣಿ ಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದ ನೀಲಂ ಕಣಿವೆಯಿಂದ ಭಾರತದ ಪಡೆಗಳತ್ತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತದ ಪಡೆಗಳು ದಿಟ್ಟ ಪ್ರತ್ಯುತ್ತರ ನೀಡಿವೆ. ಜಮ್ಮು ಕಾಶ್ಮೀರದ ತಂಗ್ದಾರ್ ಮತ್ತು ಕನ್ಸಲ್ ವಾನ್ ಪ್ರದೇಶಗಳಲ್ಲಿ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಸೂಕ್ತ ಪ್ರತ್ಯುತ್ತರ ನೀಡಲಾಗಿದೆ.