ಮಣಿಪಾಲ: ಪೇಜಾವರ ಮಠದ ಹಿರಿಯ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆ ಹೊರಡಿಸಿದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
ಶ್ರೀಗಳು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವುದರಿಂದ ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಸ್ಪಷ್ಟಪಡಿಸಿದೆ.
ಪೇಜಾವರ ಶ್ರೀಗಳು ಇತ್ತೀಚೆಗೆ ಉತ್ತರ ಭಾರತ ಪ್ರವಾಸ ಕೈಗೊಂಡಿದ್ದರು. ಅಲ್ಲಿನ ಕೊರೆಯುವ ಚಳಿ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.