ನವದೆಹಲಿ: ವಿವಾದಿತ ಪೌರತ್ವ ಕಾನೂನು ಕುರಿತಂತೆ ಈಶಾನ್ಯ ರಾಜ್ಯಗಳ ಎಲ್ಲ ಆತಂಕ ನಿವಾರಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂಶಯಕ್ಕೆ ಕಾರಣವಾಗಿರುವ ಅಂಶಗಳ ಪಟ್ಟಿ ಸಿದ್ದಪಡಿಸುವಂತೆ ಅವರು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಮಾತುಕತೆಯ ಮೂಲಕ ಎಲ್ಲ ಸಂಶಯ ಪರಿಹರಿಸುವ ಭರವಸೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾನೂನಿಗೆ ಈಶಾನ್ಯ ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ