ತಿರುವನಂತಪುರ: ಪೌರತ್ವ ಕಾನೂನಿಗೆ ತಿದ್ದುಪಡಿ ವಿರೋಧಿಸಿ ಕೆಲವು ಸಂಘಟನೆಗಳು ಕೇರಳದಲ್ಲಿ ಹರತಾಳಕ್ಕೆ ಕರೆ ನೀಡಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸ್ ಇಲಾಖೆ ಇದು ಕಾನೂನು ಬಾಹಿರ ಎಂದು ಹೇಳಿದೆ. ಸಾರ್ವಜನಿಕ ಜೀವನಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ರಾಜ್ಯದ ಪ್ರಮುಖ ಮುಸ್ಲಿಂ ಸಂಘಟನೆಗಳು ಹರತಾಳಕ್ಕೆ ಬೆಂಬಲ ಸೂಚಿಸಿಲ್ಲ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಕಡಿಮೆ