ಗುವಾಹಟಿ: ಪೌರತ್ವ ತಿದ್ದುಪಡಿ ಕಾನೂನು ಅಂಗೀಕಾರವಾದ ಬಳಿಕ ಹಿಂಸಾಚಾರ ಭುಗಿಲೆದ್ದ ಅಸ್ಸಾಂನಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರುಳುತ್ತಿದೆ. ಗುವಾಹಟಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹಗಲು ಹೊತ್ತಿನಲ್ಲಿ ಕರ್ಫ್ಯ್ಯೂ ಸಡಿಲಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಕರ್ಪ್ಯೂವನ್ನು ಮುಂದುವರಿಸಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಆದರೂ ಗರಿಷ್ಟ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ