ನವದೆಹಲಿ: ವಿವಾದೀತ ಪೌರತ್ವ ತಿದ್ದುಪಡಿ ಪ್ರತಿಭಟನೆ ದೆಹಲಿಯಲ್ಲಿ ತೀವ್ರಗೊಂಡಿದೆ. ಕೆಂಪುಕೋಟೆ ಪರಿಸರದಲ್ಲಿ ಮುನ್ನೆಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೆಹಲಿಯ ಸಾರಿಗೆ ವ್ಯವಸ್ಥೆಯಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತಿರುವ ಮೆಟ್ರೋ 16 ರೈಲು ನಿಲ್ದಾಣಗಳನ್ನು ಬಂದ್ ಮಾಡಿದೆ. ಇದರಿಂದಾಗಿ ಸಾರ್ವಜನಿಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಮಂಡಿ ಹೌಸ್ ಪರಿಸರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.