ನವದೆಹಲಿ: ಪೌರತ್ವ ತಿದ್ದುಪಡಿ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ನಟಿ ಸ್ವರ್ ಭಾಸ್ಕರ್ ಕೂಡ ಪರೋಕ್ಷ ಬೆಂಬಲ ಸೂಚಿಸಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಈ ಸಂಬಂಧ ಚಿತ್ರವೊಂದನ್ನು ಶೇರ್ ಮಾಡಿದ್ದಾರೆ. ದೆಹಲಿಯಲ್ಲಿ ಪೌರತ್ವ ಹೊಸ ಕಾನೂನು ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ. ಸ್ವರ ಭಾಸ್ಕರ್, ಬಲ ಪಂಥೀಯ ವಿಚಾರಧಾರೆಯನ್ನು ವಿರೋಧಿಸುವರ ಬಣದಲ್ಲಿ ಈಗಾಗಲೇ ಗುರುತಿಸಿಕೊಂಡಿದ್ದಾರೆ