ಶ್ರೀನಗರ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲ ಅವರ ಗೃಹ ಬಂಧನವನ್ನು ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ. ಜಮ್ಮು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಗೃಹ ಇಲಾಖೆ, ಅವರ ಗೃಹಬಂಧನವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
82 ವರ್ಷದ ಫಾರುಕ್ ಅವರು ಇಲ್ಲಿನ ಗುಪ್ಕರ್ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿಯೇ ವಾಸ್ತವ್ಯ ಮುಂದುವರಿಸಬೇಕಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಫಾರೂಕ್ ಅವರನ್ನು ಗೃಹಬಂಧನದಲ್ಲಿರಿಸಲಾಗಿತ್ತು.