ನವದೆಹಲಿ: ನೌಕಾ ಪಡೆ ಯೋಧರು ಸಾಮಾಜಿಕ ಜಾಣ ತಾಣಗಳನ್ನು ಬಳಸಬಾರದು. ಮುಖ್ಯವಾಗಿ ಹಡಗು ನಿರ್ಮಾಣ ಕೇಂದ್ರದಲ್ಲಿ ಮತ್ತು ಕಾರ್ಯಾಚರಣೆ ಸಂದರ್ಭದಲ್ಲಿ ಸ್ಮಾರ್ಟ್ ಫೋನ್ ಗಳಿಂದ ದೂರ ಇರಬೇಕು ಎಂದು ನೌಕಾ ಪಡೆ ತನ್ನ ಸಿಬ್ಬಂದಿಗೆ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದೆ. ಇತ್ತೀಚೆಗಷ್ಟೆ ಬೆಳಕಿಗೆ ಬಂದ ಪಾಕ್ ಪರ ಗೂಡ ಚರ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಈ ಆದೇಶ ಹೊರ ಬಿದ್ದಿದೆ. ಬೇಹುಗಾರಿಕಾ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಸಿಬ್ಬಂದಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.