ನವದೆಹಲಿ: ದೇಶದ ಆರ್ಥಿಕತೆ ಕುಸಿತ ತಡೆಯುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮುಕೇಶ್ ಅಂಬಾನಿ ಮತ್ತು ರತನ್ ಟಾಟಾ ಸೇರಿದಂತೆ ಪ್ರಮುಖ ಕೈಗಾರಿಕೋದ್ಯಮಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಹೀಂದ್ರ ಸಂಸ್ಥೆ ಮುಖ್ಯಸ್ಥ ಆನಂದ್ ಮಹೀಂದ್ರ, ಟೆಲಿಕಾಂ ಮುಖ್ಯಸ್ಥ ಸುನೀಲ್ ಭಾರತಿ ಮಿತ್ತಲ್ ಮತ್ತಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್ ಕುರಿತು ಚರ್ಚೆ ನಡೆಸಲಾಯಿತು.