ಕೋಲ್ಕತಾ: ಭಾರತ ಮತ್ತು ಬಾಂಗ್ಲಾ ನಡುವಿನ ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್ ಪಂದ್ಯ ವೀಕ್ಷಣೆಗೆ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಆಗಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ 10.30ರ ಹೊತ್ತಿಗೆ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಹಲವು ಪ್ರಮುಖರು ಹಸೀನಾ ಅವರನ್ನು ಬರಮಾಡಿಕೊಂಡರು. ಉದ್ಘಾಟನಾ ಸಮಾರಂಭದಲ್ಲಿ ಹಸೀನಾ ಭಾಗವಹಿಸಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಹಸೀನಾ ಭೇಟಿ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ ಬಿಗಿ ಭದ್ರತಾ ಕ್ರಮ ಕೈಗೊಳ್ಳಲಾಗಿದೆ.
