ನವದೆಹಲಿ: ರಾಷ್ಟ್ರೀಯ ಭದ್ರತಾ ವ್ಯವಸ್ಥೆ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ ಕುಮಾರ್ ಸೇರಿ ಹಲವು ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಅನೇಕ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಹಲವು ಕಡೆ ಹಿಂಸಾಚಾರಗಳೂ ನಡೆದಿವೆ. ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ತೆರಳಿದ ಪೊಲೀಸರ ಮೇಲೆ ಕೂಡ ಪ್ರತಿಭಟನಾಕಾರರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ಭದ್ರತಾ ವ್ಯವಸ್ಥೆ ಕುರಿತು ಅಮಿತ್ ಷಾ ಸಭೆ
Follow Us