ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ 40ಕ್ಕೂ ಹೆಚ್ಚು ಸಂಘಟನೆಗಳು ಬುಧವಾರ ಕರೆ ನೀಡಿರುವ ಭಾರತ್ ಬಂದ್ ಯಶಸ್ವಿಗೊಳಿಸಲು ಕಾರ್ಮಿಕ ಸಂಘಟನೆಗಳು ನಾನಾ ತಂತ್ರ ಹೆಣೆದಿವೆ. ಮುಷ್ಕರದ ಅನಿವಾರ್ಯತೆ ಬಗ್ಗೆ ಮನ ವರಿಕೆ ಮಾಡಿಕೊಡಲು ಕರ ಪತ್ರಗಳನ್ನು ಹಂಚಲಾಗುತ್ತಿದೆ. ಅಲ್ಲದೇ ಸಾಮಾಜಿಕ ಜಾಲ ತಾಣಗಳ ಮೂಲಕ ಬೆಂಬಲ ಗಿಟ್ಟಿಸಲು ಯತ್ನಿಸಲಾಗುತ್ತಿದೆ. ಈ ಮಧ್ಯೆ ಸಾರಿಗೆ, ಬ್ಯಾಂಕ್ ಸೇರಿದಂತೆ ಪ್ರಮುಖ ವಲಯಗಳ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಜನ ಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.