ನವದೆಹಲಿ: ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ರಾಮ್ ಲೀಲ ಮೈದನಾದಲ್ಲಿ ನಡೆದ ಸಭೆಯಲ್ಲಿ ಕೈ ನಾಯಕರು ಸರ್ಕಾರದ ನೀತಿಗಳನ್ನು ಟೀಕಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ ತಮ್ಮ ವಿವಾದಿತ ಹೇಳಿಕೆ ಕುರಿತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದ ಆರ್ಥಿಕ ಪ್ರಗತಿ ದರ ಕುಸಿದಿದೆ. ರೈತರು ಸಂಕಷ್ಟ ಪಡುತ್ತಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಹೊಣೆಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದರು.