ನಾಟಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ- ಎನ್ ಸಿ ಪಿ ನೇತೃತ್ವದ ಸರ್ಕಾರ ರಚನೆಯಾಗಿದೆ. ಬೆಳಿಗ್ಗೆ ಬಿಜೆಪಿಯ ದೇವೇಂದ್ರ ಫಡ್ನಾವೀಸ್ ಮುಖ್ಯಮಂತ್ರಿಯಾಗಿ ಮತ್ತು ಎನ್ ಸಿ ಪಿ ಯ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಉಭಯ ನಾಯಕರು ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಪದವಿ ಕನಸು ಕಾಣುತ್ತಿದ್ದ ಶಿವಸೇನೆಗೆ ಇದು ಭಾರೀ ಹಿನ್ನೆಡೆಯಾಗಿದೆ.