
ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಬುಲೆಟ್ ರೈಲು ಯೋಜನೆಗೆ ಹಿನ್ನೆಡೆಯಾಗುವ ಸಾಧ್ಯತೆಯಿದೆ.
ಮಹಾರಾಷ್ಟ್ರದಲ್ಲಿ ನೂತನವಾಗಿ ಜಾರಿಗೆ ಬಂದಿರುವ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ ಸಿಪಿ ಮೈತ್ರಿ ಪಕ್ಷಗಳು ಕೇಂದ್ರ ಸರ್ಕಾರ ಆರಂಭಿಸಿದ್ದ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯನ್ನು ಸ್ಥಗಿತಗೊಳಿಸುವ ಸಾಧ್ಯತೆ ನಿಚ್ಚಳವಾಗಿದೆ.
2017ರಲ್ಲಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೇ ಜಂಟಿಯಾಗಿ 88 ಸಾವಿರ ಕೋಟಿ ರೂ. ವೆಚ್ಚದ ಬುಲೆಟ್ ರೈಲು ಯೋಜನೆಗೆ ಶಂಕು ಸ್ಥಾಪನೆ ನೆರೆವೇರಿಸಿದ್ದರು.