
ಮುಂಬೈ: ಮಹಾರಾಷ್ಟ್ರ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಗುರುವಾರ ಬೆಳಗ್ಗೆ 8 ಗಂಟೆಯಿಂದ ನಡೆಯಲಿದೆ.
ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್‌ಕರ್ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ವಿಧಾನ ಭವನದ ಒಳಗೆ ಮತ್ತು ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿರಿತನದ ಆಧಾರದಲ್ಲಿ ಪ್ರಮಾಣ ವಚನ ನಡೆಯಲಿದೆ. ಮಹಾರಾಷ್ಟ್ರವಿಧಾನಸಭೆಗೆ ಆಯ್ಕೆಯಾಗಿರುವ 288 ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಈಗಾಗಲೇ ಹಂಗಾಮಿ ಸ್ಪೀಕರ್ ರನ್ನು ಕೂಡ ನೇಮಕ ಮಾಡಲಾಗಿದೆ. ಶಾಸಕರ ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಈ ಮಧ್ಯೆ ನೂತನ ಮುಖ್ಯಮಂತ್ರಿಯಾಗಿ ಉದ್ದವ್ ಠಾಕ್ರೆ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಶಿವಾಜಿ ಪಾರ್ಕ್ ನಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ.