ಮುಂಬೈ:
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ. ಮೂರು ದಿನಗಳ ಹಿಂದಷ್ಟೇ ಅವರು ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ನಾಳೆ ಸಂಜೆಯೊಳಗೆ ಬಹುಮತ ಸಾಬೀತಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮುಖ್ಯಮಂತ್ರಿ ದೇವೇಂದ್ರ ಫದ್ನವೀಸ್ ಬಹುಮತ ಸಾಬೀತುಪಡಿಸುವುದು ಕಷ್ಟವಾಗಲಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಈ ಮಧ್ಯೆ, ಮಂಗಳವಾರ ಮಧ್ಯಾಹ್ನ 3.30ಕ್ಕೆ ಮುಖ್ಯಮಂತ್ರಿ ಫಡ್ನವೀಸ್ ಸುದ್ದಿಗೋಷ್ಠಿ ಆಯೋಜಿಸಿದ್ದು, ಅಲ್ಲಿ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಮಹಾ ಡಿಸಿಎಂ ಅಜಿತ್ ಪವಾರ್ ರಾಜೀನಾಮೆ
Follow Us