ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ಇಂದು ಕೊನೆಗೊಳ್ಳುವ ಸಾಧ್ಯತೆ ಇದೆ. ನೂತನ ಸರ್ಕಾರ ರಚನೆ ಸಂಬಂಧ ಎನ್ ಸಿ ಪಿ ನಾಯಕ ಶರದ್ ಪವಾರ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆ ಆಧಾರದಲ್ಲಿ ಸರ್ಕಾರ ರಚನೆ ನಿರ್ಧಾರವಾಗಲಿದೆ. ಕಳೆದ 30 ವರ್ಷಗಳಂದ ಶಿವಸೇನೆ ಬಿಜೆಪಿ ಜೊತೆ ಗುರುತಿಸಿಕೊಂಡಿತ್ತು. ಈ ಪರಿಸ್ಥಿತಿ ಹಿನ್ನೆಲೆಯಲ್ಲಿ ಅದರ ಜೊತೆ ಕೈ ಜೋಡಿಸುವುದು ಸೂಕ್ತವಲ್ಲ. ಇದು ಮಹಾರಾಷ್ಟ್ರದ ಕೆಲವು ಕಾಂಗ್ರೆಸ್ ನಾಯಕರ ವಾದವಾಗಿತ್ತು. ಈ ಹಿನ್ನೆಲೆಯಲ್ಲಿ ಹಿರಿಯ ನಾಯಕರೊಂದಿಗೆ ಸೋನಿಯಾ ಗಾಂಧಿ ಮಾತುಕತೆ ನಡೆಸಿದ್ದರು. ಈ ಮಧ್ಯೆ ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಆರಂಭವಾಗಲಿದ್ದು, ಪ್ರತಿಪಕ್ಷ ಸದಸ್ಯರ ಸಾಲಿನಲ್ಲಿ ಕುಳಿತುಕೊಳ್ಳಲು ಶಿವಸೇನೆ ನಿರ್ಧರಿಸಿದೆ.